Monday, June 8, 2026
Homeಕರಾವಳಿಉಡುಪಿಹಿರಿಯ ಬಿಜೆಪಿ ಕಾರ್ಯಕರ್ತರನ್ನು ಸನ್ಮಾನಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಸನ್ಮಾನಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಉಡುಪಿ: ಜನ ಸಂಘದ ಕಾಲದಿಂದಲೂ ಬಿಜೆಪಿ ಹಿರಿಯ ಕಾರ್ಯಕರ್ತರಾದ ಚೇರ್ಕಾಡಿ ಕುಶಲ್ ಶೆಟ್ಟಿ ಮತ್ತು ಕೊಕ್ಕರ್ಣೆ ಹಳ್ಳಿ ಶ್ರೀಧರ್ ಶೆಟ್ಟಿ ಅವರ ಮನೆಗೆ ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಸಚಿವ ಕೊಟ್ಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ತೀವ್ರ ಅನಾರೋಗ್ಯ ಪೀಡಿತರಾಗಿದ್ದು, ಊರುಗೋಲಿನ ಸಹಾಯದಿಂದ ನಡೆಯುತ್ತಿರುವ ಚೇರ್ಕಾಡಿ ಕುಶಲ್ ಶೆಟ್ಟಿ ಮತ್ತು ಪ್ರಾಯ 90 ಮೀರಿರುವ ಹಳ್ಳಿ ಶ್ರೀಧರ ಶೆಟ್ಟಿ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಚೇರ್ಕಾಡಿ ಗ್ರಾಮದ ಬಿಜೆಪಿ ಪ್ರಮುಖರಾದ ಕಮಲಾಕ್ಷ ಹೆಬ್ಬಾರ್, ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ಭಟ್, ಉಪಾಧ್ಯಕ್ಷರಾದ ಕಿಟ್ಟಪ್ಪ ಅಮೀನ್, ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಕಾರ್ಯದರ್ಶಿ ಪೇತ್ರಿ ಸುರೇಶ್ ಪೂಜಾರಿ, ಪ್ರಮುಖರಾದ ರಾಧಾಕೃಷ್ಣ ಸಾಮಂತ್, ಶ್ಯಾಮ್ ಪ್ರಸಾದ್ ಭಟ್, ರಾಜು ಮಡಿವಾಳ, ನವೀನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!