Wednesday, June 3, 2026
Homeಕರಾವಳಿಉಡುಪಿಉಡುಪಿ: ನಾಲ್ವರ ಅಮಾನುಷ ಹತ್ಯೆ ಪ್ರಕರಣ :ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಜಿಲ್ಲಾ...

ಉಡುಪಿ: ನಾಲ್ವರ ಅಮಾನುಷ ಹತ್ಯೆ ಪ್ರಕರಣ :ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

- Advertisement -
- Advertisement -

ಬೆಳಗಾವಿ: ಭಾನುವಾರ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ ಹೇಳಿದರು.

ಮೃತ ಹಸೀನಾ ಅವರ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದ ಲಕ್ಷ್ಮೀ ಹೆಬ್ಬಾಳ್ಕರ್, ನಿಮ್ಮೊಂದಿಗೆ ನಾವಿದ್ದೇವೆ. ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಧೈರ್ಯ ತುಂಬಿದರು.

ಘಟನೆ ಸಂಬಂಧ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದ ಸಚಿವೆ ಹೆಬ್ಬಾಳ್ಕರ್, ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದರು.

- Advertisement -

Latest News

error: Content is protected !!