ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟೀಕಿಸಿದ್ದಾರೆ.ಉಡುಪಿಯಲ್ಲಿ ಇಂದು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಸುನಿಲ್ ಕುಮಾರ್ ರಿಂದ ಎರಡು ಜಿಲ್ಲೆಗಳ ಜನರಿಗೆ ಮಹಾ ಮೋಸವಾಗಿದ್ದು, ದೇವರು ಮತ್ತು ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು ಭಗವಂತನಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರ್ಕಳದ ಪರಶುರಾಮ ಮೂರ್ತಿ ಕಂಚಿನದ್ದೋ ಅಥವಾ ಫೈಬರ್ ನದ್ದೋ ಎಂಬುದು ಗೊತ್ತಾಗಿದ್ದು, ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಎಂದು ಮಾಡುವುದು ಕರಗತವಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ.
ಅಲ್ಲದೇ, ಇವರು ದೇವರನ್ನೇ ಬಿಡಲಿಲ್ಲ, ಇನ್ನು ಮನುಷ್ಯರು ಯಾವ ಲೆಕ್ಕ ಎಂದು ಹೇಳಿರುವ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.
ಇದೇ ವೇಳೆ, ಬಿಜೆಪಿ ಆಡಳಿತದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಗೋಮಾಳದಲ್ಲಿ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಹೇಳಿರುವ ಜಿಲ್ಲಾ ಉಸ್ತುವಾರಿ ಸಚಿವರು, ಪರಶುರಾಮ ಮೂರ್ತಿ ಕಾಮಗಾರಿ ಮುಂದುವರಿಸಿ ಪೂರ್ಣಗೊಳಿಸಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದ್ದಾರೆ.