Sunday, May 5, 2024
Homeಕರಾವಳಿಉಡುಪಿಉಡುಪಿ: ನೊಂದ ಮಹಿಳೆಗೆ 5 ಗಂಟೆಯಲ್ಲಿ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ನೊಂದ ಮಹಿಳೆಗೆ 5 ಗಂಟೆಯಲ್ಲಿ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

spot_img
- Advertisement -
- Advertisement -

ಉಡುಪಿ: ಮಹಿಳೆಯೊಬ್ಬರಿಗೆ ವಿಧವಾ ವೇತನ ಮಂಜೂರು ಕೋರಿ ಮನವಿ ಸಲ್ಲಿಸಿದ ಐದು ಗಂಟೆಯೊಳಗಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಜೂರಾತಿ ಕೊಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇತ್ತೀಚೆಗೆ ರಸ್ತೆ ಕಾಣದೆ ಕೆರೆಗೆ ಬಿದ್ದು ಮರಣ ಹೊಂದಿದ ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮದ ದಿವಂಗತ ದಿನಕರ ಶೆಟ್ಟಿ ಅವರ ಪತ್ನಿ ಎಂ. ಶೀಲಾ ಶೆಟ್ಟಿ ಅವರು ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿ ಇಂದು ಮಧ್ಯಾಹ್ನ 2 ಗಂಟೆಗೆ ಭೇಟಿ ಮಾಡಿ ವಿಧವಾ ವೇತನ ಮಂಜೂರು ಕೋರಿ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ್ದರು.

ಈ ಮನವಿ ಕುರಿತು ತಕ್ಷಣದಲ್ಲಿ ಕ್ರಮ ಕೈಗೊಳ್ಳುವಂತೆ ಕುಂದಾಪುರ ತಹಸೀಲ್ದಾರ್ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದರು.

ಬಳಿಕ ಇಂದು ಸಂಜೆ 6 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ ಜಿಲ್ಲೆಯ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ನಡೆದ ಸಭೆಯ ನಂತರ ಶೀಲಾ ಶೆಟ್ಟಿ ಅವರನ್ನು ಸಭೆಗೆ ಕರೆಸಿ ವಿಧವಾ ವೇತನ ಮಂಜೂರಾತಿ ಆದೇಶ ಪತ್ರವನ್ನು ನೀಡಿದ ಹಸ್ತಾಂತರಿಸಿದ ಸಚಿವೆ ಹೆಬ್ಬಾಳ್ಕರ್ ಶೀಲಾ‌ ಶೆಟ್ಟಿ ಅವರಿಗೆ ಸಾಂತ್ವನ ಹೇಳಿದರು.

- Advertisement -
spot_img

Latest News

error: Content is protected !!