Thursday, June 25, 2026
Homeತಾಜಾ ಸುದ್ದಿವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ; ಇಂದು ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಸಾಧ್ಯತೆ

ವಾಲ್ಮೀಕಿ ನಿಗಮದಲ್ಲಿ ಹಣಕಾಸು ಅವ್ಯವಹಾರ; ಇಂದು ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಸಾಧ್ಯತೆ

- Advertisement -
- Advertisement -

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ಅವ್ಯವಹಾರ ಪ್ರಕರಣದ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸಂಬಂಧ ಇಂದು ಸಚಿವ ನಾಗೇಂದ್ರ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಗೆ ಕರೆಸಿಕೊಂಡು ಚರ್ಚೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನದ ವೇಳೆಗೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ.ಇನ್ನು ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಇಂದು ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಲಿದೆ.

- Advertisement -

Latest News

error: Content is protected !!