Friday, April 19, 2024
Homeಕರಾವಳಿಉಡುಪಿವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರಾಧ್ಯಾಪಕನ ಬಗ್ಗೆ ಸಚಿವ ನಾಗೇಶ್‌ ಸಮರ್ಥನೆ

ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರಾಧ್ಯಾಪಕನ ಬಗ್ಗೆ ಸಚಿವ ನಾಗೇಶ್‌ ಸಮರ್ಥನೆ

spot_img
- Advertisement -
- Advertisement -

ಬೆಂಗಳೂರು: ಕಳೆದ ವಾರ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರ ಅಜ್ಮಲ್ ಕಸಬ್ ಗೆ ಹೋಲಿಸಿದ್ದ ಸಹಾಯಕ ಪ್ರಾಧ್ಯಾಪಕನ ಹೇಳಿಕೆಗೆ ವಿದ್ಯಾರ್ಥಿ ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿತ್ತು. ಪ್ರಾಧ್ಯಾಪಕರ ಹೇಳಿಕೆಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಇದು ದೊಡ್ಡ ವಿಚಾರವಲ್ಲ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ರಾವಣ ಅಥವಾ ಶಕುನಿ ಎಂಬ ಪದಗಳನ್ನು ಪ್ರತಿನಿತ್ಯ ಬಳಸುತ್ತಾರೆ. ವಿಧಾನಸಭೆಯಲ್ಲಿಯೂ ಸಹ ನಾವು ಅನೇಕ ಬಾರಿ ಈ ರೀತಿ ಮಾತನಾಡಿದ್ದೇವೆ. ಅದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುವ ಮೂಲಕ ಪ್ರಾಧ್ಯಾಪಕನ ಮಾತನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!