Wednesday, June 24, 2026
Homeತಾಜಾ ಸುದ್ದಿಅಮೆರಿಕ ಭೇಟಿಗೆ ಅನುಮತಿ ನಿರಾಕರಿಸಿದ್ದಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಅಮೆರಿಕ ಭೇಟಿಗೆ ಅನುಮತಿ ನಿರಾಕರಿಸಿದ್ದಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

- Advertisement -
- Advertisement -

ಬೆಂಗಳೂರು: ಐಟಿ-ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕ ಭೇಟಿಗೆ ರಾಜಕೀಯ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

ನಾನು ಕರ್ತವ್ಯ ಬದ್ಧನಾಗಿರುವ ನನ್ನ ಕರ್ನಾಟಕದ ಜನತೆ ಕುರಿತಾದ ಹೊಣೆಗಾರಿಕೆಯ ಪ್ರಜ್ಞೆಯೊಂದಿಗೆ ಈ ನಡೆ ಅನುಸರಿಸಿದ್ದೇನೆ. ಈ ಭೇಟಿಯು ಸಹಯೋಗಗಳನ್ನು ಬಲಪಡಿಸುವುದು, ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ರಾಜ್ಯಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿತ್ತು. ಕ್ಯಾಬಿನೆಟ್ ಮಂತ್ರಿ ಹಾಗೂ ವಿಶ್ವದ ಅತಿದೊಡ್ಡ ತಂತ್ರಜ್ಞಾನ ಸಮೂಹಗಳಲ್ಲಿ ಒಂದಾಗಿರುವ ರಾಜ್ಯದ ಸಚಿವರಿಗೆ, ಯಾವುದೇ ವಿವರಣೆಯಿಲ್ಲದೆ ತನ್ನ ಅಧಿಕೃತ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ನಿರಾಕರಿಸುವುದು ಗಂಭೀರ ಕಳವಳಗಳನ್ನು ಹುಟ್ಟುಹಾಕುತ್ತದೆ. ಇದು ರಾಜ್ಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಮಾತ್ರವಲ್ಲದೆ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಚೈತನ್ಯವನ್ನು ಸಹ ಕಡೆಗಣಿಸುತ್ತದೆ. ಸಚಿವಾಲಯವು ಆದಷ್ಟು ಶೀಘ್ರವೇ ಸ್ಪಷ್ಟವಾದ ಲಿಖಿತ ಸ್ಪಷ್ಟೀಕರಣವನ್ನು ನೀಡುತ್ತದೆ ಎಂದು ನಾನು ಆಶಿಸುತ್ತೇನೆ ಎಂದು ಎಕ್ಸ್ ಪೋಸ್ಟ್ ‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಫ್ರಾನ್ಸ್ ಪ್ರವಾಸ ಕೈಗೊಂಡಿದ್ದ ಸಚಿವ ಖರ್ಗೆ ಅವರಿಗೆ ಅಲ್ಲಿಂದ ನೇರವಾಗಿ ಅಮೆರಿಕಾಕ್ಕೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು.ಈ ನಡುವೆ ಇಂದು ಪ್ರಿಯಾಂಕ್ ಖರ್ಗೆ ಕೋರ್ಟ್ ಮೆಟ್ಟಿಲು ಏರಬಹುದು ಎಂದು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಚಿದಂಬರಂ ಸಾಮಾಜಿಕ ಜಾಲತಾಣದ ಮೂಲಕ ಸಚಿವ ಖರ್ಗೆ ಅವರಿಗೆ ಸಲಹೆ ನೀಡಿದ್ದರು.

- Advertisement -

Latest News

error: Content is protected !!