Wednesday, June 24, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಓಡಿಸಲು ಉತ್ಸುಕರಾಗಿದ್ದೇವೆ, ಎಲ್ಲಾ ಶಾಸಕರಿಂದಲೂ ಸಹಮತ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಓಡಿಸಲು ಉತ್ಸುಕರಾಗಿದ್ದೇವೆ, ಎಲ್ಲಾ ಶಾಸಕರಿಂದಲೂ ಸಹಮತ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

- Advertisement -
- Advertisement -

ಉಡುಪಿ: ಸಾರಿಗೆ ಇಲಾಖೆಯಿಂದ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಓಡಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಸಾರಿಗೆ ಸಚಿವೆ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಉಡುಪಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಸಚಿವ ರಾಮಲಿಂಗಾರೆಡ್ಡಿ, ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಶಾಸಕರು ಪಕ್ಷಾತೀತವಾಗಿ ಸರ್ಕಾರಿ ಬಸ್ ಓಡಿಸುವ ಕುರಿತು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೇ, ಖಾಸಗಿ ಬಸ್ ನವರು ಪದೇ ಪದೇ ಕೋರ್ಟ್ ಮೊರೆ ಹೋಗುತ್ತಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಹಾಕಲು ಸಮಸ್ಯೆಯಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇದೇ ವೇಳೆ, ಆಂಧ್ರಪ್ರದೇಶ ಕರ್ನೂಲ್ ನಲ್ಲಿ ಬಸ್ ಹೊತ್ತಿ ಉರಿದ ಘಟನೆಯ ಬಳಿಕ ಬಸ್‌ಗಳಲ್ಲಿ ಪ್ರಯಾಣಿಕರ ವಸ್ತುಗಳನ್ನು ಹೊರತುಪಡಿಸಿ ಬೇರೆ ಏನು ಕೂಡಾ ಸಾಗಿಸಲು ಅವಕಾಶ ಇಲ್ಲ ಎಂದು
ತಿಳಿಸಿರುವ ಸಾರಿಗೆ ಸಚಿವರು, ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಸ್ಥಗಿತ ಮಾಡುವ ಯೋಚನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!