Sunday, April 28, 2024
Homeಪ್ರಮುಖ-ಸುದ್ದಿಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಕೊರೊನಾ ಆತಂಕ, ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್

ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಕೊರೊನಾ ಆತಂಕ, ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್

spot_img
- Advertisement -
- Advertisement -

ಮೈಸೂರು : ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಚಿವರನ್ನು ಒಂದು ವಾರಗಳ ಅವಧಿ ಕ್ವಾರಂಟೈನ್ ‌ಗೆ ಒಳಪಡಿಸಲಾಗಿದೆ.

ಸೋಮಶೇಖರ್ ಅವರ ಕಚೇರಿಯನ್ನು ಸೀಲ್ ‌ಡೌನ್ ಮಾಡಲಾಗಿದೆ. ಸಹಕಾರ ಸಚಿವರ ನೆಲ ಮಹಡಿ ಕೊಠಡಿ ಸಂಖ್ಯೆ 38-39ರಲ್ಲಿ ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುವುದು.

 ಈ ಹಿನ್ನೆಲೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೋಂಕ್ವಾರಂಟೇನ್ ಗೆ ಒಳಗಾಗಲಿದ್ದಾರೆ. ಅಲ್ಲದೆ ಇಂದಿನಿಂದ 7 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿಯಿಂದ ಮಾಹಿತಿ ನೀಡಿದ್ದಾರೆ.

ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಚಿವರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

- Advertisement -
spot_img

Latest News

error: Content is protected !!