Wednesday, July 3, 2024
Homeಕರಾವಳಿಉಡುಪಿಸುನೀಲ್ ‌ಕುಮಾರ್ ಏನು ಅಂತಾ ಕಾರ್ಕಳದ ಜನ 20 ವರ್ಷದಿಂದ ನೋಡಿದ್ದಾರೆ:ಪ್ರಮೋದ್ ಮುತಾಲಿಕ್ ‌ಸ್ಫರ್ಧೆಗೆ ಸಚಿವ...

ಸುನೀಲ್ ‌ಕುಮಾರ್ ಏನು ಅಂತಾ ಕಾರ್ಕಳದ ಜನ 20 ವರ್ಷದಿಂದ ನೋಡಿದ್ದಾರೆ:ಪ್ರಮೋದ್ ಮುತಾಲಿಕ್ ‌ಸ್ಫರ್ಧೆಗೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ

spot_img
- Advertisement -
- Advertisement -

ಬೆಂಗಳೂರು : ಕಾರ್ಕಳ ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಹಿಂದುತ್ವದ ಹೆಸರಿನಲ್ಲಿ ಏಕೆ ಸ್ಪರ್ಧೆಗೆ ಇಳಿದಿದ್ದಾರೆ ಮತ್ರು ಅದರಿಂದ ಯಾರಿಗೆ ಲಾಭ ಎಂಬುದನ್ನು ಬಿಡಿಸಿ ಹೇಳಬೇಕಾದ ಅಗತ್ಯವಿಲ್ಲ ಎಂದು ಕಾರ್ಕಳ ಶಾಸಕ ಮತ್ತು ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ತಮ್ಮ ವಿರುದ್ಧ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿರುವ ಬಗ್ಗೆ ಸುನೀಲ್ ಕುಮಾರ್ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಆರ್ ಎಸ್ ಎಸ್ ಹಾಗೂ ವಿಶ್ವ ಹಿಂದು ಪರಿಷತ್ ಬಿಟ್ಟು ಯಾಕೆ ಹೊರ ಹೋದರು ಎಂದು ಪ್ರಶ್ನಿಸಿರುವ ಸುನೀಲ್ ಕುಮಾರ್, ಪ್ರಮೋದ್ ಮುತಾಲಿಕ್ ಈ ಹಿಂದೆ ಬಿಜೆಪಿಯ ಹಿರಿಯ ನಾಯಕ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಪ್ರಹ್ಲಾದ್ ಜೋಷಿಯವರ ವಿರುದ್ಧವೂ ಸ್ಪರ್ಧಿಸಿದ್ದರು. ಫಲಿತಾಂಶ ಏನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಕಾರ್ಕಳದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಅವರ ಮುಂದಿನ ಆಯ್ಕೆ ಯಾವುದೋ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಅಲ್ಲದೇ ಪ್ರಮೋದ್ ಮುತಾಲಿಕ್ ಕಾರ್ಕಳ ಕ್ಷೇತ್ರಕ್ಕೆ ಬಂದು ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಆದರೆ ಕ್ಷೇತ್ರದಲ್ಲಿ ಹಿಂದುತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆಯಾಗಿಲ್ಲ. ಅವರು ಹಿಂದುತ್ವದ ಹೆಸರಿನಲ್ಲಿ ಏಕೆ ಚುನಾವಣೆ ಬಯಸುತ್ತಿದ್ದಾರೆ ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ ಎಂದು ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಮುತಾಲಿಕ್ ತೆಗೆದುಕೊಂಡಿರುವ ನಿರ್ಧಾರವನ್ನು ನಾನ್ಯಾಕೆ ವಿರೋಧಿಸಲಿ ಎಂದು ಹೇಳಿರುವ ಸಚಿವರು, ಸುನಿಲ್ ಕುಮಾರ್ ಏನು ಎಂಬುದನ್ನು ಕಾರ್ಕಳದ ಜನತೆ ಕಳೆದ ಇಪ್ಪತ್ತು ವರ್ಷದಿಂದ ನೋಡಿದ್ದಾರೆ. ಮುಂದೆಯೂ ಅವರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇದಲ್ಲದೇ, ಮುತಾಲಿಕ್ ಅವರು ನನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ. ಮುಂದೆಯೂ ಮಾಡಬಹುದು. ನಾನು ಆ ವಿಚಾರಗಳಿಗೆ ಉತ್ತರ ನೀಡಲು ಹೋಗುವುದಿಲ್ಲ. ನಾನು ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಕಾರ್ಕಳದ ಅಭಿವೃದ್ದಿ ವಿಚಾರದ ಬಗ್ಗೆ ಕಾರ್ಕಳದ ಜನ ಪ್ರಶ್ನಿಸಿದರೆ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!