Saturday, June 6, 2026
Homeಕರಾವಳಿಉಡುಪಿಕಾಂಗ್ರೆಸ್ ಮಡಿಕೇರಿ ಚಲೋ ಹಿಂದೆ ಟೂಲ್ ಕಿಟ್ ಅಜೆಂಡಾ: ಉಡುಪಿಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ...

ಕಾಂಗ್ರೆಸ್ ಮಡಿಕೇರಿ ಚಲೋ ಹಿಂದೆ ಟೂಲ್ ಕಿಟ್ ಅಜೆಂಡಾ: ಉಡುಪಿಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಟೀಕೆ

- Advertisement -
- Advertisement -

ಉಡುಪಿ: ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ವಿಚಾರದಲ್ಲಿ ಕಾಂಗ್ರೆಸ್‌ ನ ಟೂಲ್ ಕಿಟ್ ಅಜೆಂಡಾ ಕಾಣುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್, ಮಡಿಕೇರಿಗೆ ಕಾಲ್ನಡಿಗೆ ಮಾಡಲು ಯಾರದ್ದೂ ವಿರೋಧ ಇಲ್ಲ, ನಿಮ್ಮ ಕಾರ್ಯಕರ್ತರು ಪ್ರತಿಭಟನೆ ಮಾಡಿರುವಾಗ ನೀವು ಯಾರ ವಿರುದ್ಧ ಕಾಲ್ನಡಿಗೆ ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮಡಿಕೇರಿ ಚಲೋ ವಿಚಾರವನ್ನು ಸ್ಪಷ್ಟಪಡಿಸಬೇಕು ಎಂದೂ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ಅಲ್ಲದೇ ಇವತ್ತು ನೆರೆಪೀಡಿತ ಪ್ರದೇಶಗಳಿಗೆ ಹೋಗುತ್ತಿರುವುದು ಒಂದು ನಾಟಕ, ಪ್ರಿ ಪ್ಲಾನ್ ಆಗಿಯೇ ಸಿದ್ದರಾಮಯ್ಯ ಓಡಾಡುತ್ತಿದ್ದಾರೆ ಎಂದು ಸುನೀಲ್ ಕುಮಾರ್ ಟೀಕಿಸಿದ್ದಾರೆ.

- Advertisement -

Latest News

error: Content is protected !!