Saturday, June 6, 2026
Homeತಾಜಾ ಸುದ್ದಿBIG BREAKING: ಕೇಂದ್ರ ಸಚಿವ ಸುರೇಶ್‌ ಅಂಗಡಿ ಇನ್ನಿಲ್ಲ

BIG BREAKING: ಕೇಂದ್ರ ಸಚಿವ ಸುರೇಶ್‌ ಅಂಗಡಿ ಇನ್ನಿಲ್ಲ

- Advertisement -
- Advertisement -

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

65 ವರ್ಷದ ಬೆಳಗಾವಿ ಸಂಸದ ಸುರೇಶ್ ಅಂಗಡಿ 15 ದಿನಗಳ ಹಿಂದೆ ಉಸಿರಾಟದ ಸಮಸ್ಯೆ ತಲೆದೋರಿದ ಹಿನ್ನಲೆಯಲ್ಲಿ ಆಸ್ಪತ್ರೆಗ ದಾಖಲಾಗಿದ್ದರು.

ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದ ಅವರು, ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ಸುರೇಶ್‌ ಅಂಗಡಿಯವರು ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದರು. ಸುರೇಶ್‌ ಅಂಗಡಿಯವರ ಹಠಾತ್‌ ನಿಧನ ರಾಜ್ಯದ ಜನತೆಯನ್ನು ದಿಗ್ಬ್ರಮೆಗೊಳಿಸಿದೆ.

ಸುರೇಶ್ ಅಂಗಡಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

- Advertisement -

Latest News

error: Content is protected !!