Wednesday, May 15, 2024
Homeತಾಜಾ ಸುದ್ದಿಎಸ್ಸೆಸ್ಸೆಲ್ಸಿ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ- ಸುರೇಶ್ ಕುಮಾರ್

ಎಸ್ಸೆಸ್ಸೆಲ್ಸಿ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ- ಸುರೇಶ್ ಕುಮಾರ್

spot_img
- Advertisement -
- Advertisement -

ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳ‌ ಸುರಕ್ಷತೆಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್  ಹೇಳಿದ್ದಾರೆ.

ಬೆಂಗಳೂರು ನಗರದ ವಿವಿಧ‌ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ನಾಳೆಯಿಂದ ನಡೆಯಲಿರುವ ಪರೀಕ್ಷಾ‌ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಸುರೇಶ್ ಕುಮಾರ್, ‘ವಿದ್ಯಾರ್ಥಿಗಳ‌ ಸುರಕ್ಷತೆಯ ದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಕ್ರಮಗಳನ್ನು ಪ್ರಾಮಾಣಿಕವಾಗಿ ಅನುಸರಿಸಿದ್ದು, ಯಾವುದೇ ಪೋಷಕರು ಧೈರ್ಯದಿಂದ ತಮ್ಮ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಿ ಅವರ ಹಿತದೃಷ್ಟಿಯಿಂದ ಕೈಗೊಂಡಿರುವ ಸರ್ಕಾರದ ಕ್ರಮವನ್ನು ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ಹೆಬ್ಬಾಳದ ಸರ್ಕಾರಿ ಪ್ರೌಢ ಶಾಲೆ, ಮಲ್ಲೇಶ್ವರಂನ ವೈಯಾಲಿಕಾವಲ್ ಸೊಸೈಟಿ ಶಾಲೆ, ಸ್ಟೆಲ್ಲಾ ಮಾರಿಸ್ ಶಾಲೆ, ನಿರ್ಮಲರಾಣಿ ಪ್ರೌಢ ಶಾಲೆ, ಜಯನಗರದ ಆರ್ ವಿ ಪ್ರೌಢಶಾಲೆ, ವಿಜಯ ಪ್ರೌಢಶಾಲೆ, ಸಾರಕ್ಕಿ‌ ಸರ್ಕಾರಿ ಪ್ರೌಢ ಶಾಲೆಗಳಿಗೆ ಭೇಟಿ‌ ನೀಡಿದ ಸಚಿವರು ಪರೀಕ್ಷಾ‌ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು‌ ಅನುಸರಿಸಿರುವ ಕ್ರಮಗಳು, ಆರೋಗ್ಯಕರ ವಾತಾವರಣ, ಮಕ್ಕಳ ಸುರಕ್ಷೆ, ಆರೋಗ್ಯ ತಪಾಸಣೆ, ಸೇರಿದಂತೆ ಪರೀಕ್ಷೆ ನಡೆಸುವ ಕುರಿತು ಎಲ್ಲ ಇಲಾಖೆಗಳ ಸಮನ್ವಯದಲ್ಲಿ ಕೈಗೊಳ್ಳಲಾಗಿರುವ ಸಿದ್ಧತಾ ಕ್ರಮಗಳನ್ನು ಅವಲೋಕಿಸಿ ತೃಪ್ತಿ‌ ವ್ಯಕ್ತ‌ಪಡಿಸಿದ್ರು.

- Advertisement -
spot_img

Latest News

error: Content is protected !!