Thursday, June 4, 2026
Homeತಾಜಾ ಸುದ್ದಿಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಸುರೇಶ್ ಕುಮಾರ್

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಸುರೇಶ್ ಕುಮಾರ್

- Advertisement -
- Advertisement -

ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಈಗಾಗಲೇ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆಯನ್ನು ಬರೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಹೀಗಿರುವಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಫೇಸ್ ಬುಕ್ ನಲ್ಲಿ ಲೈವ್ ಬಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ ಮಿತ್ರರಿಗೆ ಶಿಕ್ಷಣ ಸಚಿವನಾಗಿ ಹಾಗೂ ರಾಜ್ಯದ ಎಲ್ಲಾ ಜನರ ಪರವಾಗಿ ಶುಭ ಹಾರೈಕೆಗಳು. ಭವಿಷ್ಯದ ದೃಷ್ಟಿಯಿಂದ ಅತ್ಯಮೂಲ್ಯವಾದ ಈ ಪರೀಕ್ಷೆಯನ್ನು ನೀವು ನಿರ್ಭೀತಿಯಿಂದ, ಆತ್ಮವಿಶ್ವಾಸದಿಂದ ಎದುರಿಸಿ. ನಿಮಗೆ ಅಗತ್ಯವಾದ ಎಲ್ಲ ಸುರಕ್ಷತಾ ಕಾರ್ಯಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಎಲ್ಲರಿಗೂ ಶುಭವಾಗಲಿ. ಇಡೀ ರಾಜ್ಯದ ಜನತೆ ನಿಮ್ಮೊಂದಿಗೆ ಇದ್ದಾರೆ. ಅವರ ಆಶೀರ್ವಾದ ನಿಮ್ಮ ಜೊತೆ ಇದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿ ಮಿತ್ರರಿಗೆ ಶಿಕ್ಷಣ ಸಚಿವನಾಗಿ ಹಾಗೂ ರಾಜ್ಯದ ಎಲ್ಲಾ ಜನರ ಪರವಾಗಿ ಶುಭಹಾರೈಕೆಗಳು. ಭವಿಷ್ಯದ ದೃಷ್ಟಿಯಿಂದ ಅತ್ಯಮೂಲ್ಯವಾದ ಈ ಪರೀಕ್ಷೆಯನ್ನು ನೀವು ನಿರ್ಭೀತಿಯಿಂದ. ಆತ್ಮವಿಶ್ವಾಸದಿಂದ ಎದುರಿಸಿ. ನಿಮಗೆ ಅಗತ್ಯವಾದ ಎಲ್ಲ ಸುರಕ್ಷತಾ ಕಾರ್ಯಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಎಲ್ಲರಿಗೂ ಶುಭವಾಗಲಿ. ಇಡೀ ರಾಜ್ಯದ ಜನತೆ ನಿಮ್ಮೊಂದಿಗೆ ಇದ್ದಾರೆ. ಅವರ ಆಶೀರ್ವಾದ ನಿಮ್ಮ ಜೊತೆ ಇದೆ.

Posted by Suresh Kumar S on Wednesday, 24 June 2020

- Advertisement -

Latest News

error: Content is protected !!