Thursday, July 2, 2026
Homeಕರಾವಳಿಮಂಗಳೂರು ತಡೆಗೋಡೆ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ಯು.ಟಿ....

ಮಂಗಳೂರು ತಡೆಗೋಡೆ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ವಿತರಿಸಿದ ಸಚಿವ ಯು.ಟಿ. ಖಾದರ್

- Advertisement -
- Advertisement -

ಮಂಗಳೂರಿನಲ್ಲಿ ಸಂಭವಿಸಿದ ತಡೆಗೋಡೆ ಕುಸಿತದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್‌ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿ.ಪಂ. ಸಿಇಒ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಸ್ಪಿ ಡಾ. ಅರುಣ್ ಮತ್ತು ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!