- Advertisement -


- Advertisement -
ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ನಾಳೆ ಬೆಳಗ್ಗೆ 8.15ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣ ಆಗಮಿಸಲಿರುವ ಸಚಿವ ಖಾದರ್, 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ರೆಖ್ಯದಲ್ಲಿ ಕಾಡಾನೆಯಿಂದ ಸಾವನ್ನಪ್ಪಿದವರ ಮನೆಗೆ ಭೇಟಿ ನೀಡಲಿದ್ದಾರೆ.
ಬಳಿಕ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಧ್ಯಾಹ್ನ 12 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಖಾದರ್ ಸಭೆ ನಡೆಸಲಿದ್ದಾರೆ.
ಅನಂತರ ಬಂಟ್ವಾಳ ತಾಲೂಕಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿರುವ ಯು.ಟಿ. ಖಾದರ್, 2 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
- Advertisement -


