- Advertisement -
- Advertisement -
ಬೆಂಗಳೂರು: ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಟ್ವಿಟ್ ಮಾಡಿದ್ದು, ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.
ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ ಎಂಬುದಾಗಿ ಸಲಹೆ ಮಾಡಿದ್ದಾರೆ.
- Advertisement -