Thursday, June 25, 2026
Homeತಾಜಾ ಸುದ್ದಿಸಿದ್ದರಾಮಯ್ಯ ಸಂಪುಟ ಸಚಿವರಿಗೆ ಖಾತೆಗಳ ಮರು ಹಂಚಿಕೆ

ಸಿದ್ದರಾಮಯ್ಯ ಸಂಪುಟ ಸಚಿವರಿಗೆ ಖಾತೆಗಳ ಮರು ಹಂಚಿಕೆ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ‌ಸಿದ್ಧರಾಮಯ್ಯ ಮತ್ತು ಸಚಿವರಾದ ಎಂ.ಬಿ. ಪಾಟೀಲ್ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಬಳಿ ಇದ್ದ ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಹೊಂದಿದ್ದ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.

ಇನ್ನು ಸಿದ್ದರಾಮಯ್ಯ ಬಳಿ ಇದ್ದ ಐಟಿ ಮತ್ತು ಬಿಟಿ ಖಾತೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಹೊಂದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈಗ ಹಣಕಾಸು, ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಮತ್ತು ಇತರ ಹಂಚಿಕೆಯಾಗದ ಖಾತೆಗಳು ಉಳಿದುಕೊಂಡಿವೆ.

- Advertisement -

Latest News

error: Content is protected !!