- Advertisement -
![]()
- Advertisement -
ಪುತ್ತೂರು; ಅಪ್ರಾಪ್ತನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ . ಗುರುವಾಯನಕೆರೆಯ ವಿದ್ಯಾರ್ಥಿನಿಯೊಂದಿಗೆ ಪುತ್ತೂರಿನ ಪ್ರೌಢ ಶಾಲೆಯೊಂದರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಪ್ರಾಪ್ತ ಬಾಲಕನ ವಿರುದ್ಧ ಬಾಲಾಪರಾಧಿ ನೆಲೆಯಲ್ಲಿ ಮತ್ತು ಆತನಿಗೆ ಪ್ರಚೋದನೆ ನೀಡಿದ ಸಂಬಂಧಿಕರಿಬ್ಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ತಿಳಿಸಿದ್ದಾರೆ.
- Advertisement -


