Thursday, June 4, 2026
Homeತಾಜಾ ಸುದ್ದಿಜುಲೈ 10 ರಂದು ಬಕ್ರೀದ್ ಹಬ್ಬ ಆಚರಣೆಗೆ ರಾಜ್ಯ ಸರ್ಕಾರಿಂದ ಮಾರ್ಗಸೂಚಿ ಪ್ರಕಟ

ಜುಲೈ 10 ರಂದು ಬಕ್ರೀದ್ ಹಬ್ಬ ಆಚರಣೆಗೆ ರಾಜ್ಯ ಸರ್ಕಾರಿಂದ ಮಾರ್ಗಸೂಚಿ ಪ್ರಕಟ

- Advertisement -
- Advertisement -

ಬೆಂಗಳೂರು: ಜುಲೈ 10 ರಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಬ್ಬದ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದೆ.

ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲಿಸಬೇಕು ಮತ್ತು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ನಿಯಮ ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಖುರ್ಬಾನಿ ನಿಷೇಧಿಸಿದ್ದು, ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ‌ಮಾತ್ರ ಖುರ್ಬಾನಿ ನಡೆಸಬೇಕಿದೆ.

ಇದಲ್ಲದೇ ಖುರ್ಬಾನಿ ವೇಳೆ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವಂತೆ, ಪ್ರಾಣಿ ತ್ಯಾಜ್ಯವನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಲೇವಾರಿ ಮಾಡಲು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

- Advertisement -

Latest News

error: Content is protected !!