- Advertisement -
- Advertisement -
ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ ಬರೆದ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ಅಗಾ ಎಂಬಾತನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
- Advertisement -