Saturday, August 29, 2026
Homeತಾಜಾ ಸುದ್ದಿಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ ಕಿಡಿಗೇಡಿಗಳು; ಭಯೋತ್ಪಾದಕ ಕೃತ್ಯಕ್ಕೆ ಸಮ ಎಂದ ಸಿಎಂ

ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ ಕಿಡಿಗೇಡಿಗಳು; ಭಯೋತ್ಪಾದಕ ಕೃತ್ಯಕ್ಕೆ ಸಮ ಎಂದ ಸಿಎಂ

- Advertisement -
- Advertisement -

ಶಿವಮೊಗ್ಗ: ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಘಟನೆ ನಿನ್ನೆ ನಡೆದಿದೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಸಂಭಾವ್ಯ ದುರಂತವೊಂದು ತಪ್ಪಿ ಹೋಗಿದ್ದು, ಈ ಪ್ರಕರಣವನ್ನು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಸಮಯ ಪ್ರಜ್ಞೆ ಮೆರೆದ ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ‌.

ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ ಎಂದೂ ಸಿಎಂ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ

- Advertisement -

Latest News

error: Content is protected !!