Friday, June 5, 2026
Homeಕರಾವಳಿಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವತಿಯೊಂದಿಗೆ ಅಸಭ್ಯ ವರ್ತನೆ: ಮಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವತಿಯೊಂದಿಗೆ ಅಸಭ್ಯ ವರ್ತನೆ: ಮಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಯುವತಿಯೊಂದಿಗ ಅಸಭ್ಯವಾಗಿ ವರ್ತಿಸಿ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಿಹಾರ ಮೂಲದ ಅರರಿಯಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಸುಭೋದ್ ಕುಮಾರ್ ಎಂದು ಗುರುತಿಸಲಾಗಿದೆ.

ಜೋಕಟ್ಟೆಯ ಸಂಕದಡಿಯ ಹೊಸಮನೆಯ ನಿವಾಸಿಯಾಗಿದ್ದ ಯುವತಿ ಮಾರ್ಚ್ 23 ರಂದು ರಾತ್ರಿ 7.30ಕ್ಕೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮನೆಯ ಬಳಿ ಅಪರಿಚಿತರಿಬ್ಬರು ಅವರನ್ನು ಬಿಗಿಯಾಗಿ ಹಿಡಿದು ಅಸಭ್ಯವಾಗಿ ವರ್ತಿಸಿ ಅವರ ಕೈಯಲ್ಲಿದ್ದ 1 ಸಾವಿರ ಹಣವಿದ್ದ ಪರ್ಸ್’ನ್ನು ದೋಚಿದ್ದ ಬಗ್ಗೆ ದೂರು ದಾಖಲಿಸಿದ್ದರು. ಅದರಂತೆ ಕಾರ್ಯಾಚರಣೆಗಿಳಿದ ಪೊಲೀಸರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!