Wednesday, July 15, 2026
Homeಕರಾವಳಿಉಡುಪಿಉಡುಪಿ: ಕೋಚಿಂಗ್ ಸೆಂಟರ್‌ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ

ಉಡುಪಿ: ಕೋಚಿಂಗ್ ಸೆಂಟರ್‌ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ

- Advertisement -
- Advertisement -

ಉಡುಪಿ: ಕೋಚಿಂಗ್ ಸೆಂಟರ್‌ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ.

ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ (13) ಭಾನುವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ. ಬಳಿಕ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!