Tuesday, November 24, 2026
Homeಕರಾವಳಿಉಡುಪಿನಾಪತ್ತೆಯಾಗಿದ್ದ ವೃದ್ಧೆಯ ಮೃತದೇಹ ಬಾವಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ

ನಾಪತ್ತೆಯಾಗಿದ್ದ ವೃದ್ಧೆಯ ಮೃತದೇಹ ಬಾವಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ

- Advertisement -
- Advertisement -

ಉಡುಪಿ: ಪಡುಅಲೆವೂರಿನ ಮನೆಯಿಂದ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರ ಮೃತದೇಹ ಮಂಗಳವಾರ ಮನೆಯ ಸಮೀಪದ ಖಾಸಗಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಶಾಂತ ಶೆಟ್ಟಿಗಾರ್ತಿ ಎಂದು ಗುರುತಿಸಲಾಗಿದೆ. ಅವರು ನಾಪತ್ತೆಯಾಗಿರುವ ಕುರಿತು ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ನಾಗೇಶ್ ನೇತೃತ್ವದ ತಂಡ ಸುರಕ್ಷತಾ ಪರಿಕರಗಳ ನೆರವಿನಿಂದ ಬಾವಿಯ ಆಳದಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿತು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಅಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ವೃದ್ಧೆ ಮೃತಪಟ್ಟಿರುವುದನ್ನು ದೃಢಪಡಿಸಿದರು.

- Advertisement -

Latest News

error: Content is protected !!