Friday, July 4, 2025
Homeಚಿಕ್ಕಮಗಳೂರುಚಿಕ್ಕಮಗಳೂರು: ವಾರದ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ

ಚಿಕ್ಕಮಗಳೂರು: ವಾರದ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ

spot_img
- Advertisement -
- Advertisement -

ಚಿಕ್ಕಮಗಳೂರು: ವಾರದ ಹಿಂದೆ ನಾಪತ್ತೆಯಾಗಿದ್ದ
ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಹಳೇಹಟ್ಟಿ ತಾಂಡ್ಯ ಬಳಿ ನಡೆದಿದೆ.

ಮಡಿಕೇರಿ ಮೂಲದ ಶರತ್ ಶರತ್(33) ಶವವಾಗಿ ಪತ್ತೆಯಾದ ಫಾರೆಸ್ಟ್ ಗಾರ್ಡ್.

ಶರತ್ ಗಾಗಿ ಕಳೆದೊಂದು ವಾರದಿಂದ ಅರಣ್ಯದಲ್ಲಿ ಹುಡುಕಾಟ ನಡೆಸಲಾಗುತಿತ್ತು.ಪೊಲೀಸರು-ಅರಣ್ಯ ಸಿಬ್ಬಂದಿ ನಿರಂತರ ಶೋಧ ನಡೆಸಿದ್ರು. ನೀಲಗಿರಿ ಪ್ಲಾಂಟೇಷನ್ ನಲ್ಲಿ ಶರತ್ ಬೈಕ್, ಜರ್ಕಿನ್ ಪತ್ತೆಯಾಗಿತ್ತು. ಇಂದು ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲೇ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!