Wednesday, June 3, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

ಚಿಕ್ಕಮಗಳೂರು; ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

- Advertisement -
- Advertisement -

ಚಿಕ್ಕಮಗಳೂರು; ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿರುವ ಘಟನೆ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ ಮೃತ ವಿದ್ಯಾರ್ಥಿನಿ.

ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ ಕಾಣೆಯಾಗಿದ್ದಳು.ಕಾಣೆಯಾಗಿದ್ದ ಆಕೆಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಮುಂಜಾನೆ ಗ್ರಾಮದ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.

ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿ ಎನ್ನುವವರ ಪುತ್ರಿ ಸೃಷ್ಟಿ(19ವರ್ಷ) ಹಾಸನದ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.ಕಳೆದ ವಾರ ಮನೆಗೆ ಬಂದಿದ್ದ ಸೃಷ್ಟಿ ಡಿಸೆಂಬರ್ 21 ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.ಇಂದು ಶವವಾಗಿ ಪತ್ತೆಯಾಗಿದ್ದಾಳೆ.

ಸೃಷ್ಟಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೃಷ್ಟಿ ತಂದೆ ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ ಹಾಸನದ ವುಮೆನ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕು

- Advertisement -

Latest News

error: Content is protected !!