Thursday, June 4, 2026
Homeಕರಾವಳಿಮಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಬೆಂಗಳೂರಿನಲ್ಲಿ ಪತ್ತೆ

ಮಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿ ಬೆಂಗಳೂರಿನಲ್ಲಿ ಪತ್ತೆ

- Advertisement -
- Advertisement -

ಮಂಗಳೂರು: ನಗರದಿಂದ ಅಪಹರಣಗೊಂಡಿದ್ದಳು ಎಂದು ಹೇಳಲಾದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ರೈಲ್ವೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ.

ಎ.9ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿದ್ದ ಬಾಲಕಿಯನ್ನು ರೈಲ್ವೆ ಸುರಕ್ಷತಾ ದಳದ ಅಧಿಕಾರಿ, ಸಿಬ್ಬಂದಿ ವಿಚಾರಿಸಿದ್ದಾರೆ. ಈ ವೇಲೆ ಆಕೆ ತಾನು ಮಂಗಳೂರಿನವಳಾಗಿದ್ದು, ತನ್ನನ್ನು ಎ.8ರಂದು ಯುವಕನೋರ್ವ ಬೆಂಗಳೂರಿಗೆ ಕರೆದುಕೊಂಡು ಬಂದಿರುವುದು ತಿಳಿಸಿದ್ದಾಳೆ ಎಂದು ರೈಲ್ವೆ ಪೊಲೀಸರು ಮಂಗಳೂರು ಪೊಲೀಸರಿಗೆ ತಿಳಿಸಿದ್ದಾರೆ.

ಬಾಲಕ ಕೂಡ ಅಪ್ರಾಪ್ತ ಎನ್ನಲಾಗಿದೆ. ಇಬ್ಪರೂ ಮೂಲತಃ ಹೊರ ರಾಜ್ಯದವರು. ಪೋಷಕರು ಮಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ತಿಳಿದುಬಂದಿದೆ. ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಂದೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

- Advertisement -

Latest News

error: Content is protected !!