Thursday, June 4, 2026
Homeಕರಾವಳಿಕುಂದಾಪುರದಲ್ಲಿ ನದಿಯಲ್ಲಿ ನಾಪತ್ತೆಯಾಗಿದ್ದ ಐವರ್ನಾಡಿನ ಯುವಕನ ಮೃತದೇಹ ಪತ್ತೆ

ಕುಂದಾಪುರದಲ್ಲಿ ನದಿಯಲ್ಲಿ ನಾಪತ್ತೆಯಾಗಿದ್ದ ಐವರ್ನಾಡಿನ ಯುವಕನ ಮೃತದೇಹ ಪತ್ತೆ

- Advertisement -
- Advertisement -

ಸುಳ್ಯ; ನಿನ್ನೆ ಕುಂದಾಪುರದ ಸಮೀಪದ ಬಿಡ್ಕಲ್ ಕಟ್ಟೆಯ ಸೌಡ ಹೊಳೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿ ಮುಳುಗಿ ನಾಪತ್ತೆಯಾಗಿದ್ದ ಸುಳ್ಯದ ಐವರ್ನಾಡಿನ ಯುವಕನ ಮೃತದೇಹ ನದಿಯಲ್ಲಿ ನಿನ್ನೆ ಪತ್ತೆಯಾಗಿದೆ.ಅಗ್ನಿ ಶಾಮಕ ದಳದವರು ಮತ್ತು ಮುಳುಗುತಜ್ಞರು ಸತತ ಹುಡುಕಾಟ ನಡೆಸಿದ್ದು, ನದಿಗೆ ಇಳಿದ 300 ಮೀ ಅಂತರದಲ್ಲಿ ಮೃತದೇಹ ಪತ್ತೆಯಾಗಿದೆ.

ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್.ಎಂ. (21) ಮಧ್ಯಾಹ್ನ ಹೊಳೆಗೆ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿ ನಾಪತ್ತೆಯಾಗಿದ್ದರು.

ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದು, ಎ.29 ರಂದು ಬೆಳಿಗ್ಗೆ ತನ್ನ ಮನೆಯಾದ ಐವರ್ನಾಡಿನ ಮಡ್ತಿಲದಿಂದ ಮೂಡಬಿದ್ರೆಗೆ ಬಂದಿದ್ದರು. ಅಲ್ಲಿಂದ ಸ್ನೇಹಿತರೊಂದಿಗೆ ಸೌಡ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದರು. ಸೌಡ ಸಮೀಪದ ಹೊಳೆಯಲ್ಲಿ ನೀರಿಗಿಳಿದ ಸುಹಾಸ್ ಆಕಸ್ಮಿಕವಾಗಿ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!