Thursday, June 4, 2026
Homeಕರಾವಳಿಬೆಳ್ತಂಗಡಿ: ಅರಸಿನಮಕ್ಕಿಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಅರಸಿನಮಕ್ಕಿಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಬೆಳ್ತಂಗಡಿ: ಅರಸಿನಮಕ್ಕಿಯ ಕುಂಟಾಲಪಳಿಕೆಯಲ್ಲಿ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾಗಿದೆ.

ಕುಂಟಾಲಪಳಿಕೆ ನಿವಾಸಿ ಹರೀಶ್‌ ಆಚಾರ್ಯ (40) ಅವರು ಎರಡು ದಿನದಿಂದ ನಾಪತ್ತೆಯಾಗಿದ್ದರು.ಜು. 30ರಂದು ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಹರೀಶ್‌ ತಂದೆ, ತಾಯಿ ಅಕ್ಕಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು, ಹರೀಶ್‌ ಅವರು ಅವಿವಾಹಿತರಾಗಿದ್ದು ತಾಯಿಯೊಂದಿಗೆ ವಾಸಿಸುತ್ತಿದ್ದರು. ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದರೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!