Friday, June 5, 2026
Homeಕರಾವಳಿಮಂಗಳೂರು: ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು: ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರು: ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಜೆಸಿಬಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ರಮೇಶ್ ಕುಲಾಲ್ ಅವರು ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಗುರುಪುರ ಸೇತುವೆ ಬಳಿಗೆ ಬಸ್‌ ನಲ್ಲಿ ಬಂದು ಇಳಿದಿದಿದ್ದು, ಬಳಿಕ ನಾಪತ್ತೆಯಾಗಿದ್ದರು. ಇವರ ಮೊಬೈಲ್‌ ಮತ್ತು ಚಪ್ಪಲಿ ಸೇತುವೆಯ ಮೇಲೆ ಪತ್ತೆಯಾಗಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಡಿಆರ್‌ಎಫ್‌ ಮತ್ತು ಪೊಲೀಸರ ತಂಡ ಗುರುಪುರ ಸೇತುವೆಯ ಫಲ್ಗುಣಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದರು. ಸೋಮವಾರ ಬೆಳಗ್ಗೆ ಮೃತದೇಹ ನದಿಯಲ್ಲೇ ಪತ್ತೆಯಾಗಿದೆ.

ರಮೇಶ್ ಕುಲಾಲ್ ಅವರು ಕೌಟುಂಬಿಕ ಕಲಹ ಮತ್ತು ಆಸ್ತಿ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಅಣ್ಣ ಪದ್ಮನಾಭ ಎಂಬವರು ಬಜ್ಪೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!