Friday, June 5, 2026
Homeಕರಾವಳಿಬೆಳ್ತಂಗಡಿ : ಎರಡು ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ಬೆಳ್ತಂಗಡಿ : ಎರಡು ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಎರಡು ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತಂಡ ಪತ್ತೆ ಹಚ್ಚಿ ಮನೆಯವರಿಗೆ ಹಸ್ತಾಂತರಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ತಣ್ಣಿರುಪಂಥ ಗ್ರಾಮ ಕರಿಂಕಿತೋಡಿ ಮನೆಯ ಅಬ್ಬಾಸ್ ಮಗ ಶರೀಫ್(40) ಎಂಬವರು ಜನವರಿ 2022 ರಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಒಂದು ವರ್ಷ ಹತ್ತು ತಿಂಗಳ ಬಳಿಕ ಕೊಲ್ಲೂರು ದೇವಸ್ಥಾನದ ಪಕ್ಕದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಮಾನಸಿಕವಾಗಿ ಅಸ್ವಸ್ಥತೆಯಿಂದ ಇದ್ದ ಶರೀಫ್ ನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದ ತಂಡದ ಸಿಬ್ಬಂದಿ ಪತ್ತೆಹಚ್ಚಿ ಮನೆಯವರಿಗೆ ಹಸ್ತಾಂತರ ಮಾಡಿದ್ದಾರೆ.

- Advertisement -

Latest News

error: Content is protected !!