Thursday, June 4, 2026
Homeಕರಾವಳಿಕಡಬ; ಅಲಂಕಾರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಶವವಾಗಿ ಪತ್ತೆ

ಕಡಬ; ಅಲಂಕಾರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ಕಡಬ: ಅಲಂಕಾರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು  ಉಪ್ಪಿನಂಗಡಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಅಲಂಕಾರಿನ ನಿವಾಸಿ ಸೂರಪ್ಪ ಪೂಜಾರಿ (74) ಮಧ್ಯಾಹ್ನ ಅಲಂಕಾರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದರು.

ಸಂಜೆಯಾದರೂ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಮನೆಯವರು ಸಂಬಂಧಿಕರ ಮನೆ ಸೇರಿದಂತೆ ಎಲ್ಲಾ ಕಡೆ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಬುಧವಾರ ಬೆಳಗ್ಗೆ ಆಲಂಕಾರು ಪೇಟೆಯ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ಉಪ್ಪಿನಂಗಡಿ ಕಡೆಗೆ ಹೋಗುವ ಜೀಪಿನಲ್ಲಿ ಸಂಚರಿಸಿದ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಅದರಂತೆ ಉಪ್ಪಿನಂಗಡಿಯ ಪೇಟೆಯಲ್ಲಿ ಹುಡುಕಾಡಿದಾಗ ಕುಮಾರಧಾರ ನದಿ ತೀರದಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಹಾಗೂ ಮಾನಸಿಕ ಖನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಮೃತರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬ ಸಂಶಯ ವ್ಯಕ್ತವಾಗುತ್ತಿದ್ದು ಮರಣೋತ್ತರ ವರದಿಯಿಂದ ಧೃಢ ಪಡಬೇಕಾಗಿದೆ. ಮೃತರು ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Latest News

error: Content is protected !!