Thursday, June 4, 2026
Homeಕರಾವಳಿಉಡುಪಿಕಾರ್ಕಳ : ಮದ್ದು ತರಲೆಂದು ಹೋದ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ : ಮದ್ದು ತರಲೆಂದು ಹೋದ ವ್ಯಕ್ತಿ ಶವವಾಗಿ ಪತ್ತೆ

- Advertisement -
- Advertisement -

ಕಾರ್ಕಳ : ಕ್ಲಿನಿಕ್ ಗೆ ಮದ್ದು ತರಲೆಂದು ಹೋದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಲ್ಲಿನ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಕೋಟ್ನಕಟ್ಟೆ ನಿವಾಸಿ ಬಿ. ಪ್ರಕಾಶ್ ಪೈ (67) ಎಂಬವರು ಜೂ.13 ರಂದು ನಾಪತ್ತೆಯಾಗಿದ್ದು ಜೂ.16ರಂದು ಕುಕ್ಕೆಹಳ್ಳಿ ಹಾಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತದೇಹದ ಬಳಿ ವಿಷದ ಬಾಟಲಿ ಇದ್ದು ಪತ್ತೆಯಾಗಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಪ್ರಕಾಶ್ ಉಡುಪಿಯ ಸರ್ವೀಸ್ ಬಸ್ ನಿಲ್ದಾಣದ ಬಳಿ ಇರುವ ಕ್ಲಿನಿಕ್‌ಗೆ ಚಿಕಿತ್ಸೆಗೆಂದು ತೆರಳಿದವರು ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದರು. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!