Wednesday, June 24, 2026
Homeಕರಾವಳಿಮಂಗಳೂರುಮಂಗಳೂರು: ಮಾರ್ಚ್-2026 ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಾರ್ವಜನಿಕರು ಕಳೆದುಕೊಂಡಿದ್ದ 150 ಮೊಬೈಲ್ ಫೋನ್ ಗಳನ್ನು...

ಮಂಗಳೂರು: ಮಾರ್ಚ್-2026 ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಾರ್ವಜನಿಕರು ಕಳೆದುಕೊಂಡಿದ್ದ 150 ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಸ್ತಾಂತರ.

- Advertisement -
- Advertisement -

ಮಂಗಳೂರು: ಸಾರ್ವಜನಿಕರು ಮೊಬೈಲ್ ಕಳೆದುಕೊಂಡಿರುವ ಬಗ್ಗೆ, CEIR ( Central Equipment Identity Register, https://ceir.sancharsaathi.gov.in) Portal ,  ಆ ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲೂ 2026ನೇ ಮಾರ್ಚ್ ತಿಂಗಳಿನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಾಚರಣೆಯ ಮೂಲಕ ಅನ್ಯ ಜಿಲ್ಲೆಗಳಲ್ಲಿ ಹಾಗೂ ಅನ್ಯ ರಾಜ್ಯಗಳಲ್ಲಿ ಸೇರಿದಂತೆ ಒಟ್ಟು 150 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ, ಅವುಗಳನ್ನು ಆಯಾ ಠಾಣಾ ಮಟ್ಟದಲ್ಲಿ ದೂರುದಾರರಿಗೆ ಹಿಂತಿರುಗಿಸಲಾಗಿರುತ್ತದೆ. ಈ ಕಾರ್ಯಾಚರಣೆಯು ಮುಂದಿನ ದಿನಗಳಲ್ಲೂ ನಿರಂತರವಾಗಿ ಸಾಗಲಿದ್ದು ಸಾರ್ವಜನಿಕರು ಈ ನೂತನ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಲು ಈ ಮೂಲಕ ವಿನಂತಿ ಮಾಡಿದ್ದಾರೆ.

- Advertisement -

Latest News

error: Content is protected !!