Monday, May 20, 2024
Homeಕರಾವಳಿಮಂಗಳೂರುಮಂಗಳೂರಿನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅರಂತೋಡಿನಲ್ಲಿ ಪತ್ತೆ; ಎಕ್ಸಾಂ ಟೆನ್ಶನ್ ನಿಂದ ರಿಲ್ಯಾಕ್ಸ್ ಆಗಲು ಜಾಲಿ ಟ್ರಿಪ್...

ಮಂಗಳೂರಿನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅರಂತೋಡಿನಲ್ಲಿ ಪತ್ತೆ; ಎಕ್ಸಾಂ ಟೆನ್ಶನ್ ನಿಂದ ರಿಲ್ಯಾಕ್ಸ್ ಆಗಲು ಜಾಲಿ ಟ್ರಿಪ್ ಹೋಗಿದ್ದ ಯುವತಿ

spot_img
- Advertisement -
- Advertisement -

ಮಂಗಳೂರಿನಿಂದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಪ್ರಕರಣ ಸುಖ್ಯಾಂತವಾಗಿದೆ. ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು  ಅರಂತೋಡಿನಲ್ಲಿ ಪತ್ತೆಯಾಗಿದ್ದಾಳೆ.  

ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಪ್ರಥಮ ವರ್ಷದ ಎಂಎಸ್ಸಿ ವಿದ್ಯಾರ್ಥಿನಿಯಾಗಿರುವ ಈಕೆ ಮೇ 7 ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು.ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ಪ್ರಕರಣದ ದೂರು ದಾಖಲಿಸಿದ್ದರು.

ಆಕೆ ಪುಸ್ತಕ ಮತ್ತು ಮೊಬೈಲ್ ಅನ್ನು ಕಾಲೇಜಿನಲ್ಲಿ ಬಿಟ್ಟು ತೆರಳಿದ್ದರಿಂದ ಭಾರೀ ಅನುಮಾನ ಮೂಡಿಸಿತ್ತು. ಪೊಲೀಸರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರಕಿರಲಿಲ್ಲ. ಮೇ 9 ರಂದು ಪಾಂಡೇಶ್ವರ ಠಾಣೆಗೆ ವಿದ್ಯಾರ್ಥಿನಿ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಇದ್ದಾಳೆ ಎಂಬ ಮಾಹಿತಿ ದೊರಕಿದ್ದು, ಅಲ್ಲಿಗೆ ತೆರಳಿದ ಪೊಲೀಸರು ಆಕೆಯನ್ನು ಮಂಗಳೂರಿಗೆ ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.

ಎಂಎಸ್ಸಿ ಪರೀಕ್ಷೆಯನ್ನು ಎದುರಿಸುವುದು ಕಷ್ಟವಾಗಿತ್ತು. ಅತಿಯಾದ ಒತ್ತಡದಿಂದಾಗಿ ಸ್ವಲ್ಪ ವಿಶ್ರಾಂತಿ ಪಡೆಯಬೇಕೆಂದು ನಿರ್ಧರಿಸಿ ಅದರಂತೆ ಕಾಲೇಜಿನಿಂದ ಹೊರಬಂದು ಕಂಕನಾಡಿಯಲ್ಲಿ ಚಿಕ್ಕಮಗಳೂರಿಗೆ ತೆರಳುವ ಬಸ್ ಹತ್ತಿ, ನಂತರ ಕೆಎಸ್‌ಆರ್ಟಿಸಿ ಬಸ್ಸಿನಲ್ಲಿ ಫ್ರೀ ಇರುವುದರಿಂದ ನೇರವಾಗಿ ಚಿಕ್ಕಮಗಳೂರಿಗೆ ತೆರಳಿ, ಅಲ್ಲಿಂದ ಮೈಸೂರಿಗೆ ಹೋಗಿ, ನಂತರ ಅಲ್ಲಿಂದ ಮತ್ತೆ ಮಡಿಕೇರಿಗೆ ಬಸ್ಸಿನಲ್ಲಿ ಬಂದು ಬಸ್ ನಿಲ್ದಾಣದಲ್ಲಿ ತಮಿಳು ಮಾತನಾಡುವ ಹುಡುಗಿಯೊಬ್ಬಳು ಪರಿಚಯವಾಗಿ ಆಕೆಯ ಜೊತೆಗೆ ಬುಧವಾರ ಸುಳ್ಯಕ್ಕೆ ಬಂದಿದ್ದಾಳೆ.ಬಳಿಕ  ಅರಂತೋಡಿನಲ್ಲಿ ಆಕೆಯ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದಾಗಿ ಮಾಹಿತಿ ನೀಡಿದ್ದಾಳೆ. ತಮಿಳು ಬಿಟ್ಟರೆ ಕನ್ನಡ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಮೂಲತ: ತಮಿಳುನಾಡಿನವಳಾಗಿದ್ದು, ತಂದೆ-ತಾಯಿ ಮಂಗಳೂರಿನಲ್ಲಿ ನೆಲೆಸಿದ್ದಾರೆ.

ಸುಳ್ಯದಲ್ಲಿ ಹುಡುಗಿಯಿರುವ ಬಗ್ಗೆ ಅವರ ಮನೆಯವರು ಪರಿಚಯದ ಮಂಗಳೂರಿನ ಪೊಲೀಸ್ ಒಬ್ಬರಿಗೆ ತಿಳಿಸಿದ್ದಾರೆ. ಅದರಂತೆ ಪಾಂಡೇಶ್ವರ್ ಠಾಣೆಯ ಪೊಲೀಸರು ಅರಂತೋಡಿಗೆ ತೆರಳಿ ಆಕೆಯನ್ನು ಮಂಗಳೂರಿಗೆ ಕರೆತಂದಿದ್ದಾರೆ.

- Advertisement -
spot_img

Latest News

error: Content is protected !!