Thursday, June 4, 2026
Homeಕರಾವಳಿಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ

- Advertisement -
- Advertisement -

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ ಎಂಬವರು ಮೃತ ವ್ಯಕ್ತಿ.

ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರು ಎ.14 ರಂದು ರಾತ್ರಿ ವೇಳೆ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಮನೆಯಿಂದ ಹೊರಗೆ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಇವರ ಮಗ ಶಿವಾನಂದ ದೂರು ನೀಡಿದ್ದರು.

ಎ. 14 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಎಲ್ಲರ ಜೊತೆ ಕುಳಿತುಕೊಂಡಿದ್ದವರು ಮನೆಯಲ್ಲಿದ್ದ ಉಡುಗೆಯಲ್ಲಿ ಮನೆಯಿಂದ ಹೊರಗೆ ಹೋದವರು ಮನೆಗೆ ಬರಲಿಲ್ಲ ಎಂದು ಅವರು ತಿಳಿಸಿದ್ದರು. ಇವರ ಗುರುತು ಪತ್ತೆಯಾದಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ಕೋರಿದ್ದರು. ಇಂದು ಬೆಳಿಗ್ಗೆ ಸಜೀಪ ಮುನ್ಮೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಮನೆಯ ಬದಿಯಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಇವರ ಶವ ತೇಲಾಡುತ್ತಿದ್ದನ್ನು ನೋಡಿ ಮನೆಯವರಿಗೆ ತಿಳಿಸಿದ್ದಾರೆ.

- Advertisement -

Latest News

error: Content is protected !!