Saturday, May 4, 2024
Homeಕರಾವಳಿವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣ; ಬೆಂಗಳೂರಿನಲ್ಲಿ ತನಿಖೆ ಚುರುಕು; ಎರಡು ದಿನಗಳೊಳಗೆ ಪತ್ತೆಹಚ್ಚುವ ಭರವಸೆ

ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣ; ಬೆಂಗಳೂರಿನಲ್ಲಿ ತನಿಖೆ ಚುರುಕು; ಎರಡು ದಿನಗಳೊಳಗೆ ಪತ್ತೆಹಚ್ಚುವ ಭರವಸೆ

spot_img
- Advertisement -
- Advertisement -

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳನ್ನೊಳಗೊಂಡ ಪೊಲೀಸರ ತಂಡವು ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಿಷನರ್ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ತನಿಖೆಯನ್ನು ಚುರುಕುಗೊಳಿಸಿದೆ.

ಉಳ್ಳಾಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು, ಈ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ಧನ್ಯಾ ನಾಯಕ್ ಅವರಿಗೆ ಮನವಿ ಸಲ್ಲಿಸಿದೆ.

ಪ್ರಕರಣದ ವಿವರ: ಪಿಎಚ್‌ಡಿ ಸಂಶೋಧನ ವಿದ್ಯಾರ್ಥಿನಿಯಾಗಿದ್ದ ಚೈತ್ರಾ ಫೆ. 17ರಂದು ಮಾಡೂರಿನ ಬಾಡಿಗೆ ಮನೆಯಿಂದ ಸ್ಕೂಟರ್‌ನಲ್ಲಿ ಹೊರಟು ಸುರತ್ಕಲ್‌ನಲ್ಲಿ ಸ್ಕೂಟರ್ ತ್ಯಜಿಸಿ ನಾಪತ್ತೆಯಾಗಿದ್ದಳು. ಆರಂಭದಲ್ಲಿ ಸಾಮಾನ್ಯ ನಾಪತ್ತೆ ಪ್ರಕರಣ ಎಂದು ಪರಿಗಣಿಸಿದ್ದ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಶೋಧ ಕಾರ್ಯ ನಡೆಸಿದ್ದರು. ಆದರೆ ಚೈತ್ರಾ ನಾಪತ್ತೆಯ ಹಿಂದೆ ಡ್ರಗ್ ಪೆಡ್ಲರ್ ಯುವಕನ ಕೈವಾಡವಿದೆ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದಾಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಆಕೆಯ ಮೊಬೈಲ್ ಲೊಕೇಷನ್ ಆಧಾರದಲ್ಲಿ ಬೆಂಗಳೂರು ಕಡೆ ತೆರಳಿರುವ ಮಾಹಿತಿಯನ್ನು ಕಲೆ ಹಾಕಿದ್ದರು. ಈ ನಡುವೆ ಆಕೆ ಮೆಜೆಸ್ಟಿಕ್‌ನಿಂದ ಬಸ್ ಇಳಿದು ಹೋಗಿರುವ ಮಾಹಿತಿ ಸಿಸಿಟಿವಿಯಲ್ಲಿ ಪತ್ತೆ ಹಚ್ಚಿದ್ದ ಪೊಲೀಸರು ಬೆಂಗಳೂರು ವ್ಯಾಪ್ತಿಯಲ್ಲಿ ಆಕೆಯ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ಆಕೆಯನ್ನು ಪತ್ತೆ ಹಚ್ಚುವ ಭರವಸೆಯನ್ನು ಪೊಲೀಸರು ಇಟ್ಟುಕೊಂಡಿದ್ದಾರೆ.

ಚೈತ್ರಾ ಪ್ರಕರಣಕ್ಕೆ ಸಂಬಂಧಿಸಿದ ಯುವಕನೂ ನಾಪತ್ತೆಯಾಗಿದ್ದಾನೆ. ಆತ ಡ್ರಗ್ ಪೆಡ್ಲರ್ ಆಗಿದ್ದು, ಚೈತ್ರಾಳೊಂದಿಗೆ ಸಂಪರ್ಕವಿದ್ದ. ಪುತ್ತೂರು ಮೂಲದ ಆತ ನಾಪತ್ತೆಯಾಗಿದ್ದು ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇಬ್ಬರೂ ಒಂದೇ ಕಡೆ ವಾಸವಾಗಿದ್ದಾರಾ ಅಥವಾ ಪೊಲೀಸರಿಂದ ತಪ್ಪಿಸಿಕೊಂಡು ಬೇರೆ ಬೇರೆ ಕಡೆ ಅವಿತುಕೊಂಡಿದ್ದಾರ ಎನ್ನುವ ಕುರಿತು ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎಸಿಪಿಗೆ ಮನವಿ: ಉಳ್ಳಾಲ ಪ್ರಖಂಡ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು ಗುರುವಾರ ಎಸಿಪಿ ಧನ್ಯಾ ಅವರನ್ನು ಭೇಟಿಯಾಗಿ ನಾಪತ್ತೆ ಪ್ರಕರಣದ ಹಿಂದೆ ಇರುವವರನ್ನು ಪತ್ತೆಹಚ್ಚಬೇಕು, ಚೈತ್ರಾಗೆ ಡ್ರಗ್ಸ್ ನೀಡಿ ಆಕೆಯನ್ನು ಅಪಹರಿಸಿದ್ದು, ಈ ಲವ್ ಜೆಹಾದ್ ಹಿಂದಿನ ಶಕ್ತಿಗಳನ್ನು ಬಂಧಿಸಿಬೇಕು ಮತ್ತು ಡ್ರಗ್ಸ್ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!