Thursday, June 4, 2026
Homeಕರಾವಳಿಕಾಸರಗೋಡುನೀರು ಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ನೀರು ಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

- Advertisement -
- Advertisement -

ಕಾಸರಗೋಡು: ಇಲ್ಲಿನ ಮಣಿಯಂಪಾರೆ ಅಣೆಕಟ್ಟಿನಲ್ಲಿ ಸ್ನಾನ ಮಾಡುತ್ತಿದ್ದಾಗ ನೀರು ಪಾಲಾಗಿದ್ದ ವಿದ್ಯಾರ್ಥಿಯ ಮೃತ ದೇಹ ನಿನ್ನೆ ಸಂಜೆ ಪತ್ತೆಯಾಗಿದೆ. ಚಲ್ಲಂಗಯ ಸಿ.ಜೆ ಮೂಲೆಯ ಅಬ್ದುಲ್ಲರವರ ಪುರೆ ಜಸ್ವಾ ದ್ (17) ಮೃತ ಪಟ್ಟವರು.

ಸೋಮವಾರ ಸ್ನೇಹಿತರ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಘಟನೆ ನಡೆದಿತ್ತು. ಬಳಿಕ ಅಗ್ನಿಶಾಮಕ ದಳದ ಸಿಬಂದಿಗಳು, ಬದಿಯಡ್ಕ ಠಾಣಾ ಪೊಲೀಸರು ಶೋಧ ನಡೆಸಿದ್ದರೂ ಪತ್ತೆಯಾಗಿರಲಿಲ್ಲ . ಮಂಗಳವಾರ ಸಂಜೆ ಮತ್ತೆ ಶೋಧ ನಡೆಸಿದಾಗ ಮೃತದೇಹ ಹೊಳೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

- Advertisement -

Latest News

error: Content is protected !!