Thursday, June 4, 2026
Homeಕರಾವಳಿಮಂಗಳೂರು: ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ನಾಲ್ವರು ಮಕ್ಕಳು ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ನಾಲ್ವರು ಮಕ್ಕಳು ಶವವಾಗಿ ಪತ್ತೆ

- Advertisement -
- Advertisement -

ಮಂಗಳೂರು: ಪ್ರಿಪರೇಟರಿ ಎಕ್ಸಾಂ ಬರೆದು ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಸಮೀಪದ ಡ್ಯಾಂನಲ್ಲಿ ಪತ್ತೆಯಾಗಿದೆ.

10ನೇ ತರಗತಿ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್, ರಾಘವೇಂದ್ರ ಎಂಬವರು ಮಂಗಳವಾರ ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಬಳಿಕ ನಾಪತ್ತೆಯಾಗಿದ್ದರು.

ಪೋಷಕರ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರಿಗೆ ವಿದ್ಯಾರ್ಥಿಗಳು ಹಳೆಯಂಗಡಿ ತೆರಳಿರುವುದು ಗೊತ್ತಾಗಿದೆ.  ಅಲ್ಲಿ ನೋಡಿದಾಗ ವಿದ್ಯಾರ್ಥಿಗಳ ಸಮವಸ್ತ್ರ, ಚಪ್ಪಲಿ, ಬ್ಯಾಗ್‌ಗಳು ಪತ್ತೆಯಾಗಿದ್ದವು. ಬಳಿಕ ಹುಡುಕಾಡಿದಾಗ ನಾಲ್ವರ ಶವಗಳು ಪತ್ತೆಯಾಗಿವೆ.

ನೀರಿನಲ್ಲಿ ಈಜಲು ತೆರಳಿದಾಗ ನೀರಿನಲ್ಲಿ ಮುಳುಗಿ  ಸಾವನ್ನಪ್ಪಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

- Advertisement -

Latest News

error: Content is protected !!