Thursday, June 4, 2026
Homeಕರಾವಳಿಬೆಳ್ತಂಗಡಿ : ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

ಬೆಳ್ತಂಗಡಿ : ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಉಜಿರೆಯ ಕ್ರೀಡಾ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯನ್ನು ಹೈದರಾಬಾದ್ ನಲ್ಲಿ ಬೆಳ್ತಂಗಡಿ ಪೊಲೀಸರು 20 ದಿನದ ಬಳಿಕ ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ್ ಅವರ ನೇತೃತ್ವದ ಸಿಬ್ಬಂದಿ ಚರಣ್ ರಾಜ್ ಮತ್ತು ಬಸವರಾಜ್ ವಿದ್ಯಾರ್ಥಿ ನಾಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸಿ ಹೈದರಾಬಾದ್ ನ ನಿಜಮಾಬಾದ್ ನ ಸಂಬಂಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜೂ.18 ರಂದು ಕರೆದುಕೊಂಡು ಬಂದು ಪೋಷಕರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!