- Advertisement -
![]()
- Advertisement -
ಉಡುಪಿ: ಹೂಡೆ ಸಮೀಪದ ಬೀಚ್ ನಲ್ಲಿ ನೀರಿಗೆ ಇಳಿದಿದ್ದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರು ಪಾಲಾಗಿ ಇಬ್ಬರು ಮೃತಪಟ್ಟ ಘಟನೆ ನಿನ್ನೆ ಸಂಜೆ ನಡೆದಿತ್ತು. ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮತ್ತೊರ್ವ ವಿದ್ಯಾರ್ಥಾಗಾಗಿ ನಿನ್ನೆಯಿಂದ ಶೋಧ ಕಾರ್ಯ ನಡೆಯುತ್ತಿತ್ತು. ಇಂದು ವಿದ್ಯಾರ್ಥಿ ಶ್ರೀಕರನಿಗಾಗಿ (19) ಮೃತದೇಹ ಪತ್ತೆಯಾಗಿದೆ.
ವೀಕೆಂಡ್ ಹಿನ್ನಲೆಯಲ್ಲಿ ಸುಮಾರು 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಹೂಡೆ ಬೀಚ್ ನಲ್ಲಿ ವಿಹಾರಕ್ಕೆಂದು ಬಂದಿದ್ದರು. ಅಲ್ಲಿ ಕೆಲವರು ಸಮುದ್ರದ ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ಮೂವರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಟಿಹೋಗಿದ್ದರು. ಸ್ಥಳೀಯರು ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದರು. ಈ ವೇಳೆ ಅವರು ಸಾವನ್ನಪ್ಪಿದ್ದರು. ಇನ್ನೋರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಆತನ ಮೃತದೇಹ ಇಂದು ಪತ್ತೆಯಾಗಿದೆ.
- Advertisement -


