Friday, June 5, 2026
Homeಕರಾವಳಿಮಂಗಳೂರುಮಂಗಳೂರು: ನಾಪತ್ತೆಯಾಗಿದ್ದ ಯುವಕನ ಶವ ರೈಲ್ವೆ ಹಳಿಯಲ್ಲಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಶವ ರೈಲ್ವೆ ಹಳಿಯಲ್ಲಿ ಪತ್ತೆ

- Advertisement -
- Advertisement -

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಶವ ರೈಲ್ವೆ ಹಳಿಯಲ್ಲಿ ಪತ್ತೆಯಾಗಿರುವ ಘಟನೆ ಉಚ್ಚಿಲ ರೈಲ್ವೆ ಗೇಟ್ ಬಳಿ ನಡೆದಿದೆ.

ಜು.2 ರಂದು ರಾತ್ರಿ ಕೋಟೆಕಾರು ಬೀರಿ ನಿವಾಸಿ, ಮೋಹನ್ ದಾಸ್ ಎಂಬವರ ಪುತ್ರ ತೇಜಸ್(25) ಮಲಗುವ ಕೋಣೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಆತನ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು(ಜು.04) ಬೆಳಿಗ್ಗೆ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.

ತೇಜಸ್ ಮಣಿಪಾಲ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದ್ದು ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!