Monday, June 8, 2026
Homeತಾಜಾ ಸುದ್ದಿಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರ ನೇಮಕಾತಿಯಲ್ಲಿ ಯಡವಟ್ಟು: ದಿ. ರಾಜೇಶ್ವರಿ ತೇಜಸ್ವಿ ಹೆಸರು ಸೇರಿಸಿದ ರಾಜ್ಯ...

ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರ ನೇಮಕಾತಿಯಲ್ಲಿ ಯಡವಟ್ಟು: ದಿ. ರಾಜೇಶ್ವರಿ ತೇಜಸ್ವಿ ಹೆಸರು ಸೇರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ಸದಸ್ಯರ ನೇಮಕಾತಿಯಲ್ಲಿ ಎಡವಟ್ಟು ನಡೆದಿದೆ.

ಚಿಕ್ಕಮಗಳೂರಿನ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರ ನೇಮಕಾತಿಯಲ್ಲಿ ರಾಜ್ಯ ಸರ್ಕಾರ ಎಡವಟ್ಟು ಮಾಡಿಕೊಂಡಿದೆ.

ಪ್ರತಿಷ್ಠಾನದ ಮಹಿಳಾ ಸದಸ್ಯರಾಗಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಧರ್ಮಪತ್ನಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಸೇರ್ಪಡೆ ಮಾಡಲಾಗಿದೆ.

ರಾಜೇಶ್ವರಿ ತೇಜಸ್ವಿ 2021ರ ಡಿಸೆಂಬರ್ ತಿಂಗಳಿನಲ್ಲಿ ನಿಧನರಾಗಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪೂರ್ಣ ಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ನಿನ್ನೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

- Advertisement -

Latest News

error: Content is protected !!