Thursday, May 2, 2024
Homeಕರಾವಳಿಮಂಗಳೂರು: ಮತ್ತೊಬ್ಬರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಯತ್ನ ಪ್ರಕರಣ:  ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ...

ಮಂಗಳೂರು: ಮತ್ತೊಬ್ಬರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಯತ್ನ ಪ್ರಕರಣ:  ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

spot_img
- Advertisement -
- Advertisement -

ಮಂಗಳೂರು: ಮತ್ತೊಬ್ಬರ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ತೆರಳಲು ಪ್ರಯತ್ನಿಸಿದ್ದ ಆರೋಪಿಗೆ ಮಂಗಳೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

ಬಂಟ್ವಾಳ ಸರಪಾಡಿ ಗ್ರಾಮದ ಬದ್ರುದ್ದೀನ್‌ ಶಿಕ್ಷೆಗೊಳಪಟ್ಟ ಅಪರಾಧಿ. ಬದ್ರುದ್ದೀನ್‌, ಹಸೈನಾರ್‌ ಎನ್ನುವವರ ಪಾಸ್‌ಪೋರ್ಟ್‌ ಬಳಸಿ 2010ರ ಫೆ.2ರ ರಾತ್ರಿ 7.37ಕ್ಕೆ ದುಬೈಗೆ ತೆರಳಲು ಪ್ರಯತ್ನಿಸಿದ್ದ. ಈ ಪಾಸ್‌ಪೋರ್ಟ್‌ ಅನ್ನು ಅಬ್ಟಾಸ್‌ ಅವರು ನೀಡಿದ್ದರು.

ಇಮಿಗ್ರೇಷನ್‌ ಅಧಿಕಾರಿ ಕೆ.ಎಂ. ಚಂದ್ರಶೇಖರ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಬಜಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಅವರು ಸೆ. 28ರಂದು 1ನೇ ಆರೋಪಿ ಬದ್ರುದ್ದೀನ್‌ಗೆ 1 ವರ್ಷ ಜೈಲು ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿದ್ದು, 2ನೇ ಆರೋಪಿ ಬಂಟ್ವಾಳ ಮಂಚಿ ಗ್ರಾಮದ ಅಬ್ಟಾಸ್‌ ಅವರನ್ನು ಖುಲಾಸೆಗೊಳಿಸಲಾಗಿದೆ.

- Advertisement -
spot_img

Latest News

error: Content is protected !!