Thursday, June 4, 2026
Homeಕರಾವಳಿಮಂಗಳೂರು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಫ್ಲೆಕ್ಸ್ ವಿರೂಪಗೊಳಿಸಿದ ಕಿಡಿಗೇಡಿಗಳು

ಮಂಗಳೂರು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಫ್ಲೆಕ್ಸ್ ವಿರೂಪಗೊಳಿಸಿದ ಕಿಡಿಗೇಡಿಗಳು

- Advertisement -
- Advertisement -

ಮಂಗಳೂರು : ಕಿಡಿಗೇಡಿಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಫ್ಲೆಕ್ಸ್ ವಿರೂಪಗೊಳಿಸಿದ ಘಟನೆ ಮೂಡಬಿದರೆಯಲ್ಲಿ ನಡೆದಿದೆ.

ಮೂಡುಬಿದಿರೆಯಲ್ಲಿ ಭಾನುವಾರ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸ್ವಾಗತ ಕೋರಿ ಈ ಫ್ಲೆಕ್ಸ್‌ ಗಳನ್ನ ಹಾಕಲಾಗಿತ್ತು. ಇದರಲ್ಲಿದ್ದ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈಯವರು ಶುಭಕೋರಿದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾನಿಗೊಳಿಸಿದ್ದಾರೆ.

ಮಿಥುನ್ ರೈಯವರನ್ನು ಕೇಂದ್ರೀಕರಿಸಿ ಅವರ ಭಾವಚಿತ್ರವಿರುವ ಜಾಗವನ್ನು ಮಾತ್ರ ಕತ್ತರಿಸಿ ತೆಗೆದು ಹಾನಿಗೊಳಿಸಿದ್ದಾರೆ. ಫ್ಲೆಕ್ಸ್ ಹಾನಿಗೊಳಿಸಿದ್ದರ ಬಗ್ಗೆ ಮೂಡುಬಿದಿರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!