Sunday, May 19, 2024
Homeಕರಾವಳಿರಾಜ್ಯ ಕಾಂಗ್ರೆಸ್ ಯುವಘಟಕ ಅಧ್ಯಕ್ಷರ ಸ್ಥಾನದ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಮಂಗಳೂರಿನ ಮಿಥುನ್ ರೈ !

ರಾಜ್ಯ ಕಾಂಗ್ರೆಸ್ ಯುವಘಟಕ ಅಧ್ಯಕ್ಷರ ಸ್ಥಾನದ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ಮಂಗಳೂರಿನ ಮಿಥುನ್ ರೈ !

spot_img
- Advertisement -
- Advertisement -

ಬೆಂಗಳೂರು: ಬಸನಗೌಡ ಬಾದರ್ಲಿಯವರ ಅಧಿಕಾರಾವಧಿ ಮುಗಿದ ನಂತರ ತೆರವಾಗಿರುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭರ್ಜರಿ ಪೈಪೋಟಿ ಆರಂಭವಾಗಿದೆ. ಹಿರಿಯ ಶಾಸಕರ ಮಕ್ಕಳು ಹಾಗೂ ನಾಯಕರ ಬೆಂಬಲಿಗರು ಯುವಘಟಕದ ಸಾರಥ್ಯ ವಹಿಸಿಕೊಳ್ಳಲು ನಾಮುಂದು ತಾಮುಂದು ಎಂದು ಮುಗಿಬೀಳುತ್ತಿದ್ದಾರೆ.

ಯುವಘಟಕಕ್ಕೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಹಿರಿಯ ನಾಯಕ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಜಯನಗರ ಶಾಸಕಿ ಸೌಮ್ಯಾರೆಡ್ಡಿ, ಕಾಂಗ್ರೆಸ್‌ನ ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರ ಮಗ ಎಂ.ಎಸ್. ರಕ್ಷಾ ರಾಮಯ್ಯ, ಶಾಸಕ ಎನ್.ಎ.ಹ್ಯಾರೀಸ್ ಪುತ್ರ ನಲಪಾಡ್,ತುಮಕೂರು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ಯುವನಾಯಕ ಮಿಥುನ್ ರೈ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದವರು. ಅಲ್ಲದೇ ಕರಾವಳಿ ಕರ್ನಾಟಕ ಭಾಗದಲ್ಲಿ ಮಿಥುನ್ ರೈ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಈ ಎಲ್ಲ ವಿಷಯಗಳನ್ನು ಮತ್ತು ಪಕ್ಷ ಬಲವರ್ಧನ ದೃಷ್ಟಿಯಿಂದ ಸೂಕ್ಷ್ಮವಾಗಿ ಗಮನಿಸಿದಾಗ ಮಿಥುನ್ ರೈ ರಾಜ್ಯಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏರಿದರೂ ಆಶ್ಚರ್ಯ ಪಡಬೇಕಾಗಿಲ್ಲ.

ಕರಾವಳಿ ಕರ್ನಾಟಕದಲ್ಲಿ ತನ್ನ ಕಾರ್ಯವೈಖರಿ ಮೂಲಕ ಅನೇಕ ಯುವ ಮನಸ್ಸುಗಳನ್ನು ಗೆದ್ದಿರುವ ಮಿಥುನ್ ರೈ, ಕೊರೋನಾ ಲಾಕ್ ಡೌನ್ ಸಮಯದಲ್ಲಿ ಜಿಲ್ಲೆಯ ಹಲವು ಕಡೆ ಸಂಚರಿಸಿ ಸಂಕಷ್ಟದಲ್ಲಿದ್ದವರಿಗೆ ನೆರವಾಗಿದ್ದರು. ಹಾಗೆಯೇ ಜಿಲ್ಲೆಯಲ್ಲಿ ಬಾಕಿಯಾಗಿದ್ದ ಉತ್ತರಭಾರತದ ಕಾರ್ಮಿಕರನ್ನು ಮತ್ತು ಕೇರಳದ ವಿದ್ಯಾರ್ಥಿಗಳನ್ನು ಮರಳಿ ಮತ್ತೆ ಅವರ ತವರೂರಿಗೆ ಕಳುಹಿಸುವ ನಿಟ್ಟಿನಲ್ಲಿ ಮಿಥುನ್ ರೈ ಶ್ರಮಿಸಿದ್ದರು.

ಇನ್ನು ಉಳಿದಂತೆ ರೇಸ್ ನಲ್ಲಿರುವ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ನಲಪಾಡ್ ಕ್ರಿಮಿನಲ್ ಹಿನ್ನಲೆ ಉಳ್ಳವರಾಗಿದ್ದು ಹಾಗೂ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಈಗಾಗಲೇ ಜಯನಗರ ಶಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ ಮತ್ತೆ ರಾಜ್ಯ ಯುವ ಕಾಂಗ್ರೆಸ್ ನಲ್ಲಿ ಅಧಿಕಾರ ಪಡೆಯುವುದು ಅನುಮಾನ ಎನ್ನುತ್ತಾರೆ ರಾಜಕೀಯ ಪಂಡಿತರು.

- Advertisement -
spot_img

Latest News

error: Content is protected !!