Wednesday, June 26, 2024
Homeತಾಜಾ ಸುದ್ದಿನಾನು ದನದ ಮಾಂಸ ತಿನ್ನುವುದನ್ನು ಬೇಡ ಎನ್ನಲು ನೀನು ಯಾವನು? ಅಂದ್ರು ಸಿದ್ದರಾಮಯ್ಯ-ಮಾಜಿ ಸಿಎಂ ಹೇಳಿಕೆಗೆ...

ನಾನು ದನದ ಮಾಂಸ ತಿನ್ನುವುದನ್ನು ಬೇಡ ಎನ್ನಲು ನೀನು ಯಾವನು? ಅಂದ್ರು ಸಿದ್ದರಾಮಯ್ಯ-ಮಾಜಿ ಸಿಎಂ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ!..

spot_img
- Advertisement -
- Advertisement -

ಬೆಂಗಳೂರು:ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ರಾಜ್ಯಾದ್ಯಂತ ಸುದ್ದಿಯಾಗಿದ್ದಾರೆ.

ಅವರು ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್‍ನ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿಗೋ ಹತ್ಯೆ ನಿಷೇಧ ಕಾಯ್ದೆಯನ್ನು 1964ರಲ್ಲೆ ಕಾಂಗ್ರೆಸ್ ಜಾರಿಗೆ ತಂದಿತ್ತು. ಈಗ ಅದನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ಮುಂದಾಗಿದೆ ಅಷ್ಟೇ ಎಂದರು.

ನಾನು ದನದ ಮಾಂಸ ತಿನ್ನುತ್ತೇನೆ. ನೀನು ಯಾವನ್ನಯ್ಯ ಕೇಳೋಕೆ. ನೀನು ತಿನ್ನು ಎಂದು ನಾನು ಬಲವಂತ ಮಾಡಲ್ಲ. ನನ್ನ ಆಹಾರ ನನ್ನ ಇಷ್ಟ.ನಾನು ಸಿದ್ಧಾಂತಕ್ಕೆ ಬದ್ಧವಾಗಿದ್ದೇನೆ. ನಾವು ನಂಬಿರುವ ಸಿದ್ಧಾಂತಗಳನ್ನು ಗಟ್ಟಿಯಾಗಿ ಹೇಳಬೇಕು ಎಂದು ಈ ವೇಳೆ ಅವರು ಹೇಳಿದರು.ಸಧ್ಯ ಇವರ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!