Wednesday, September 2, 2026
Homeಕರಾವಳಿಜನಸ್ಪಂದನಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಗಂಜಿ ಊಟದ ವ್ಯವಸ್ಥೆ

ಜನಸ್ಪಂದನಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಗಂಜಿ ಊಟದ ವ್ಯವಸ್ಥೆ

- Advertisement -
- Advertisement -

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕಚೇರಿಗೆ ಅಹವಾಲು ಹಿಡಿದು ಬರುವ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ, ಅವರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಮೂಲಕ ಹೊಸ ಮಾದರಿಯ ಕಾಳಜಿ ಮೆರೆದಿದ್ದಾರೆ.

ಪುತ್ತೂರು ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ನಡೆಯುವ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಜನರು ಆಗಮಿಸುತ್ತಾರೆ. ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ತಮ್ಮ ಕಷ್ಟಗಳನ್ನು ತೋಡಿಕೊಳ್ಳುವ ಸಾರ್ವಜನಿಕರನ್ನು ಶಾಸಕರು ಖುದ್ದಾಗಿ ಭೇಟಿಯಾಗಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಕಾರ್ಯ ಮಾಡುತ್ತಿದ್ದಾರೆ.

ದೂರದ ಊರುಗಳಿಂದ ಬಂದು ಗಂಟೆಗಟ್ಟಲೆ ಕಾಯುವ ಸಂದರ್ಭದಲ್ಲಿ ಬಡವರು, ವೃದ್ಧರು ಸೇರಿದಂತೆ ಹಲವರು ಮಧ್ಯಾಹ್ನದ ಊಟವೂ ಇಲ್ಲದೆ ಸಂಕಷ್ಟಪಡುತ್ತಿರುವುದನ್ನು ಗಮನಿಸಿದ ಶಾಸಕರು, ಸಾರ್ವಜನಿಕರ ಅನುಕೂಲಕ್ಕಾಗಿ ಈ ವಾರದಿಂದ ಪ್ರತಿ ಸೋಮವಾರ ವಿಶೇಷ ‘ಗಂಜಿ ಊಟ’ದ ವ್ಯವಸ್ಥೆಯನ್ನು ಆರಂಭಿಸಿದ್ದಾರೆ. ಯಾವುದೇ ಧರ್ಮ ಅಥವಾ ರಾಜಕೀಯ ಭೇದಭಾವವಿಲ್ಲದೆ ಕಚೇರಿಗೆ ಬರುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಈ ಸೇವೆಯ ಲಾಭ ಸಿಗುತ್ತಿದ್ದು, ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಜನಸ್ಪಂದನಾ ಕಾರ್ಯಕ್ರಮಕ್ಕೆ ಇದೀಗ ಹಸಿವು ನೀಗಿಸುವ ಈ ನಡೆ ಇನ್ನಷ್ಟು ಮೆರುಗು ನೀಡಿದೆ.

ಜನಪ್ರತಿನಿಧಿಯೊಬ್ಬರು ಕೇವಲ ಆಡಳಿತಾತ್ಮಕ ದೂರುಗಳನ್ನು ಆಲಿಸುವುದು ಮಾತ್ರವಲ್ಲದೆ, ಕಚೇರಿಗೆ ಬರುವ ಜನರ ಮೂಲಭೂತ ಅಗತ್ಯವಾದ ಹಸಿವಿನ ಬಗ್ಗೆಯೂ ಕಾಳಜಿ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಅವರ ಹೊಟ್ಟೆ ತುಂಬಿಸುವ ಶಾಸಕ ಅಶೋಕ್ ರೈ ಅವರ ಈ ಜನಪರ ನಡೆ ಇದೀಗ ಪುತ್ತೂರು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಪ್ರಶಂಸೆಗೆ ಕಾರಣವಾಗಿದೆ.

- Advertisement -

Latest News

error: Content is protected !!