Friday, November 20, 2026
Homeಕರಾವಳಿವಿಟ್ಲದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ವಿಟ್ಲದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

- Advertisement -
- Advertisement -

ವಿಟ್ಲ: ರಾಜ್ಯದ 16 ಸ್ಥಳಗಳಲ್ಲಿ ನೂತನ ಇಂದಿರಾ ಕ್ಯಾಂಟೀನ್‌ಗಳು ಉದ್ಘಾಟನೆಗೊಂಡಿದ್ದು, ಇದರ ಅಂಗವಾಗಿ ವಿಟ್ಲದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಬಡವರ ಹಸಿವು ನೀಗಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಕ್ಯಾಂಟೀನ್ ಸಿಬ್ಬಂದಿ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿಗೆ ತಲಾ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಲಿದ್ದು, ಅಭಿವೃದ್ಧಿ ಕಾರ್ಯಗಳ ಮೂಲಕವೇ ದೇಶವನ್ನು ವಿಶ್ವಗುರುವನ್ನಾಗಿ ಮಾಡಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಂಜುನಾಥ್ ಜಿ., ರಾಮಣ್ಣ ಪಿಲಿಂಜ, ಡಾ. ಎಂ.ಪಿ. ಶ್ರೀನಾಥ್, ಡಾ. ಸಂತೋಷ್ ಕುಮಾರ್, ಸುಧಾಕರ್, ಅಬ್ದುಲ್ ಹಮೀದ್ ಗೋಳ್ತಮಜಲು ಸೇರಿದಂತೆ ಹಲವು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

- Advertisement -

Latest News

error: Content is protected !!